
ನಗರದ ಗಾಂಧಿ ನಗರದಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೂತನ ಕಚೇರಿಯ ಉದ್ಘಾಟನೆಯನ್ನು ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ರವರು ನೆರವೇರಿಸಿದರು. ಆರ್‌ಪಿಐ(ಬಿ) ರಾಷ್ಟ್ರೀಯ ಅಧ್ಯಕ್ಷ, ದಸಂಸ ರಾಜ್ಯಾಧ್ಯಕ್ಷ ಎನ್. ಮೂರ್ತಿ ಮುಖಂಡರಾದ ಮೋಹನ್ ರಾಜ್, ಜಯರಾವ್, ಪರ್ವತೀಶ್ ಮತ್ತಿತರರು ಉಪಸ್ಥಿತರಿದ್ದರು.























