
ಸಂಗೀತನಾದ ಟ್ರಸ್ಟ್ ವತಿಯಿಂದ ನಗರದ ನಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರುನಾಡ ರತ್ನ ಪ್ರಶಸ್ತಿ ಸಮಾರಂಭದಲ್ಲಿ ಶ್ರೀ ಪರಮಪೂಜ್ಯ ಪಲ್ಲಕ್ಕಿ ನಾರಾಯಣ ಸ್ವಾಮೀಜಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಾಜಿ ಶಾಸಕ ರಾಜಣ್ಣ, ಟ್ರಸ್ಟ್ ಅಧ್ಯಕ್ಷ ಎಂ. ಕೃಷ್ಣಮೂರ್ತಿ ಸಮಾಜ ಸೇವಕರಾದ ಡಾ. ದೇವರಾಜು, ಮುನಿರಾಜು ಮತ್ತಿತರ ಗಣ್ಯರು ಭಾಗವಹಿಸಿದ್ದರು.





























