
ಕಲಬುರಗಿ: ನೀಟ್-ಯುಜಿ ಹಗರಣ ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್‍ಓ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿದರು. ಎಐಡಿಎಸ್‍ಓ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ದೇವದುರ್ಗ, ಜಿಲ್ಲಾ ಸಮಿತಿ ಸದಸ್ಯರಾದ ದೇವರಾಜ, ಯುವರಾಜ ಸೇರಿದಂತೆ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.























