ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್, ಸಿಎನ್ ಜಿ ಮತ್ತು ಎಲ್.ಪಿ.ಜಿ ಬೆಲೆ ಏರಿಕೆ ಮಾಡಿದ್ದನ್ನು ಖಂಡಿಸಿ ಹುಬ್ಬಳ್ಳಿ ಧಾರವಾಡ ಜಿಲ್ಲಾ ಮಹಾನಗರ ಹಾಗೂ ಗ್ರಾಮೀಣ ಕಾಂಗ್ರೆಸ್ ಸಮಿತಿಗಳ ವತಿಯಿಂದ ನಗರದ ಕಾಂಗ್ರೆಸ್ ಕಛೇರಿಯಿಂದ ತಹಶಿಲ್ದಾರರ ಕಚೇರಿಯವರಿಗೆ ಎತ್ತಿನ ಬಂಡಿ ಮೂಲಕ ಕಾಂಗ್ರೆಸ್‍ನಿಂದ ಪ್ರತಿಭಟನಾ ರ್ಯಾಲಿ ನಡೆಯಿತು. ಹುಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಗ್ರಾಮೀಣ ಅಧ್ಯಕ್ಷ ಅನಿಲಕುಮಾರ್ ಪಾಟೀಲ್, ಪಾಲಿಕೆ ಸದಸ್ಯ ಇಮ್ರಾನ್ ಎಲಿಗಾರ, ಮುಖಂಡರಾದ ಚಂದ್ರಶೇಖರ ಜುಟ್ಟಲ್, ಸದಾನಂದ ಡಂಗನವರ, ಶಿವಾನಂದ ಮುತ್ತಣ್ಣವರ, ಪ್ರೇಮನಾಥ ಚಿಕ್ಕತುಂಬಳ, ಅರ್ಜುನ್ ಪಾಟೀಲ್ ಮೊದಲಾದವರು ಇದ್ದರು.