ಕಲಬುರಗಿ: ಶೈಕ್ಷಣಿಕ ಕೇಂದ್ರಗಳಲ್ಲಿ ಸಮಾನತೆ ತರುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಶಿಸ್ತುಬದ್ಧ ಸಮವಸ್ತ್ರ ನಿಯಮ ಹಿಂಪಡೆದಿರುವ ಕಾಂಗ್ರೆಸ್ ಸರಕಾರದ ನಿರ್ಧಾರ ಖಂಡಿಸಿ, ಇಂದು ಭಾರತೀಯ ಜನತಾ ಪಕ್ಷದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.ಬಿಜೆಪಿ ನಗರಾಧ್ಯಕ್ಷ ಚಂದ್ರಕಾಂತ ಪಾಟೀಲ, ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ಮಾಜಿ ಸಂಸದ ಡಾ.ಉಮೇಶ ಜಾಧವ, ಪ್ರಮುಖರಾದ ಬಾಬುರಾವ ಚವ್ಹಾಣ,ಡಾ.ಸುಧಾ ಹಾಲಕಾಯಿ,ಗಿರಿರಾಜ ಯಳಮೇಲಿ ,ಲಿಂಗರಾಜ ಬಿರಾದಾರ ಅವರು ಸೇರಿದಂತೆ ಹಲವರು ಪಾಲ್ಗೊಂಡರು.