ನೀಟ್ ಪರೀಕ್ಷೆಯನ್ನು ರದ್ದುಪಡಿಸುವಂತೆ, ನೀಟ್ ಪ್ರಶ್ನೆ ಪತ್ರಿಕೆ ಬಯಲು ಆಗಲು ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಬೆಂಗಳೂರು ಜಿಲ್ಲಾ ಸಮಿತಿ ಸದಸ್ಯರುಗಳು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.