ನಗರದ ಅಮರಗೋಳದಲ್ಲಿರುವ ಶ್ರೀ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಹಾನಿಯಾಗಿರುವ ಶ್ರೀ ಬಸವೇಶ್ವರ ಮೂರ್ತಿಯನ್ನು ತೆರವುಗೊಳಿಸಿ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು ಎಂದು ಕರ್ನಾಟಕ ನವ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಡಾ. ಈರಪ್ಪ ಎಮ್ಮಿ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ವೇಳೆ ಮಂಜುನಾಥ ಹೆಬಸೂರ ಸೇರಿದಂತೆ ಇತರರು ಇದ್ದರು.