ಬೆಂಗಳೂರಿನ ಹೊಂಬೇಗೌಡನಗರದಲ್ಲಿ ವೀರ ಮದಕರಿ ಗೆಳೆಯರ ಬಳಗದ ವತಿಯಿಂದ ನಡೆದ ಸಮಾರಂಭದಲ್ಲಿ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪಠ್ಯ ಸಾಮಗ್ರಿಗಳನ್ನು ವಿತರಿಸಿದರು.ಕಾಂಗ್ರೆಸ್ ಮುಖಂಡ ಆರ್. ವಿ ಯುವರಾಜ್, ವೀರ ಮದಕರಿ ಗೆಳೆಯರ ಬಳಗದ ಅಧ್ಯಕ್ಷ ಡಿ. ಶೇಖರ್, ಉಮೇಶ್ ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.