ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೇಲ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿ ಇರುವ 5-6 ತಿಂಗಳ ವೇತನ ಪಾವತಿಸುವಂತೆ ಆಗ್ರಹಿಸಿ ಸರಕಾರಿ ಹಾಸ್ಟೇಲ್ ಮತ್ತು ವಸತಿಶಾಲಾ ಹೊರಗುತ್ತಿಗೆ ನೌಕರರ ಸಂಘ ಜಿಲ್ಲಾಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಮೊಹಮ್ಮದ ಜಮೀರೊದ್ದಿನ್,ಕಲ್ಯಾಣಿ ಪೂಜಾರಿ ,ನಾಗರತ್ನ ಮದನಕರ ಸೇರಿದಂತೆ ಹಲವರು ಪಾಲ್ಗೊಂಡರು.