
ಕಲಬುರಗಿ: ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸದ ಮೇಲಿನ ಇಡಿ ದಾಳಿ ವಿರೋಧಿಸಿ ಮತ್ತು ಸಿಪಿಐಎಂ ಪಕ್ಷದ ಕಾರ್ಯಕರ್ತರ ಬಂಧನ ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ, ಮುಖಂಡರಾದ ಭೀಮಶೆಟ್ಟಿ ಯಂಪಳ್ಳಿ, ಸುಧಾಮ ಧನ್ನಿ, ಶ್ರೀಮಂತ ಬಿರಾದಾರ, ಶಾಂತಾ ಘಂಟೆ, ಚಂದಮ್ಮ ಗೋಳಾ, ಪದ್ಮಿನಿ ಕಿರಣಗಿ, ನಾಗಪ್ಪ ರಾಯಚೂರಕರ್, ಪ್ರಕಾಶ ಕುಸಾಳೆ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.























