
ಕಲಬುರಗಿ:ರೈತರಿಗೆ ಉತ್ತಮ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರ ಸರಿಯಾದ ದರದಲ್ಲಿ ಪೂರೈಕೆ ಮಾಡುವಂತೆ ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ಹಾಗೂ ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾ ಮಂಡಳಿಗಳ ನೇತೃತ್ವದಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಎಐಕೆಎಸ್ ರಾಜ್ಯ ಕಾರ್ಯಾಧ್ಯಕ್ಷ ಮೌಲಾ ಮುಲ್ಲಾ, ಜಿಲ್ಲಾ ಅಧ್ಯಕ್ಷ ಭೀಮಾಶಂಕರ ಮಾಡಿಯಾಳ್, ಸಿಪಿಐ ಜಿಲ್ಲಾ ಕಾರ್ಯದರ್ಶಿ ಡಾ.ಮಹೇಶಕುಮಾರ ರಾಠೋಡ್, ಸಹ ಕಾರ್ಯದರ್ಶಿ ಪ್ರಭುದೇವ ಯಳಸಂಗಿ, ಸಿದ್ದಪ್ಪ ಪಾಲ್ಕಿ, ಮಹಮ್ಮದ್ ಚೌಧರಿ, ಸಾಜೀದ್ ಅಹಮದ್, ಶಿವಲಿಂಗಮ್ಮ ಲೇಂಗಟಿಕರ್, ಸಿದ್ದಣ್ಣ, ಭೀಮರಾಯ ಸೇರಿದಂತೆ ಮತ್ತಿತರರು ಇದ್ದರು.
























