
ಕಲಬುರಗಿ: ನಗರದ ರಾಮನಗರ ಭಾಗ-2ರಲ್ಲಿ ವಾಸಿಸುತ್ತಿರುವ ಅಲಿಮಾರಿ, ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ, ಹಿಂದುಳಿದ ವರ್ಗದ ಜನಾಂಗದವರಿಗೆ ಮಂಜೂರಾದ ಕೊಳವೆ ಬಾವಿ ತೋಡಲು ತಡೆಯೊಡ್ಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಮತ್ತು ಮಹಾನಗರ ಪಾಲಿಕೆ ವತಿಯಿಂದ ಕೊಳವೆ ಬಾವಿ ತೋಡಬೇಕು ಎಂದು ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಸ್ಲಂ ಜನಾಂದೋಲನ ಜಿಲ್ಲಾ ಸಂಚಾಲಕಿ ರೇಣುಕಾ ಸರಡಗಿ, ಜಿಲ್ಲಾ ಅಧ್ಯಕ್ಷೆ ಗೌರಮ್ಮಾ ಮಾಕಾ, ಕಾರ್ಯದರ್ಶಿ ಶರಣು ಕಣ್ಣಿ, ಸುನಿತಾ ಕೊಳ್ಳೂರ, ಶರಣು ಹಂಗರಗಿ, ಮರೆಪ್ಪ ಭೋವಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.






















