ಕಲಬುರಗಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರೋಧಿಸಿ, ರಸಗೊಬ್ಬರ ಕೊರತೆ ನೀಗಿಸಬೇಕು, ವಿದ್ಯುತ್ ಖಾಸಗೀಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ನಗರದ ನೆಹರು ಗಂಜ್‍ನ ಕೃಷಿ ಹುಟ್ಟುವಳಿ ಮಾರುಕಟ್ಟೆ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಸಂಘದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಉಪಾಧ್ಯಕ್ಷರಾದ ದೇವು ಬಿರಾದಾರ, ರೇವಣಸಿದ್ದಪ್ಪ ಪಾಟೀಲ, ಶರಣಪ್ಪ ವಚ್ಚಾ, ಸದಸ್ಯ ಭೀಮಶಾ ಬಡದಾಳ, ಸಿದ್ದು ಎಸ್ ಎಲ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.