ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ ಅವರ ಮೇಲೆ ಸುಳ್ಳು ಆರೋಪಗಳ ಆಧಾರದ ಮೇಲೆ ದೂರು ದಾಖಲಿಸಿರುವುದನ್ನು ಹಿಂಪಡೆಯಬೇಕು ಎಂದು ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರ ಪೊಲೀಸ್ ಆಯುಕ್ತರಿಗೆ ಇಂದು ಮನವಿ ಪತ್ರ ಸಲ್ಲಿಸಲಾಯಿತು. ಒಕ್ಕೂಟದ ರಾಜ್ಯ ಕಾರ್ಯಾಧ್ಯಕ್ಷ ದಶರಥ ಕಲಗುರ್ತಿ, ಮಲ್ಲಿಕಾರ್ಜುನ ಜೀನಕೇರಿ, ರಾಜು ಕಟ್ಟಿಮನಿ, ರಮೇಶ ವಾಡೇಕರ್, ಸಚಿನ್ ಕಟ್ಟಿಮನಿ, ರಂಜೀತಕುಮಾರ ಮೂಲಿಮನಿ, ರಾಜು ವಾಡೇಕರ್, ಪ್ರದೀಪ್ ಭಾವೆ, ವಿನೋದ ಓಂಕಾರ ಸೇರಿದಂತೆ ಮತ್ತಿತರರು ಇದ್ದರು.