ಕಲಬುರಗಿ: ಬಾಕಿ ಇರುವ ಸುಮಾರು 300 ಕೋಟಿ ರೂ. ಬೆಳೆವಿಮೆಹಣ ಪಾವತಿಸುವಂತೆ ಆಗ್ರಹಿಸಿ ಇಂದು ಕರ್ನಾಟಕ ಪ್ರಾಂತ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ,ದಿಲೀಪ ನಾಗೂರೆ,ದೇವು ಬಿರಾದಾರ ಅವರು ಸೇರಿದಂತೆ ಹಲವರು ಪಾಲ್ಗೊಂಡರು.