
ಕಲಬುರಗಿ: ಕರ್ನಾಟಕ ಯುವ ಶಕ್ತಿ ಸಂಘಟನೆಯಿಂದ ಭಾನುವಾರ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿದ್ದ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಣ ಶಕ್ತಿ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಿದರು. ತೊನಸನಹಳ್ಳಿಯ ಡಾ.ಮಲ್ಲಣ್ಣಪ್ಪ ಸ್ವಾಮೀಜಿ, ಚಿನ್ಮಯಗಿರಿಯ ವೀರ ಮಹಾಂತ ಶಿವಾಚಾರ್ಯರು, ಕರ್ನಾಟಕ ಯುವ ಶಕ್ತಿ ಸಂಸ್ಥಾಪಕ ಅಧ್ಯಕ್ಷ ಅವ್ವಣ್ಣಗೌಡ ಎನ್.ಪಾಟೀಲ, ಡಾ.ಫಾರುಕ್ ಮಣ್ಣೂರ್, ಶಿವಾನಂದ ಖಜೂರ್ಗಿ ಸೇರಿದಂತೆ ಮತ್ತಿತರರು ಇದ್ದರು.


























