
ಕಲಬುರಗಿ: ಎಲ್ಲಾ ಮುನಿಸಿಪಲ್ ಕಾರ್ಮಿಕರನ್ನು ಖಾಯಂಗೊಳಿಸಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮುನಿಸಿಪಲ್ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಸಂಘದ ಗೌರವಾಧ್ಯಕ್ಷೆ ಕೆ.ನೀಲಾ, ಡಾ.ಮೀನಾಕ್ಷಿ ಬಾಳಿ, ಸಿಐಟಿಯು ಜಿಲ್ಲಾ ಅಧ್ಯಕ್ಷೆ ಶಾಂತಾ ಘಂಟಿ, ಲೋಹಿತ್, ಸುಧಾಮ ಧನ್ನಿ, ಶರಣು ಅತನೂರ, ವೈಶಾಲಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


























