ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ರೈತರ 1 ಲಕ್ಷದವರೆಗಿನ ಸಾಲ ಮನ್ನಾ ಮಾಡಿ, ಬೆಳೆವಿಮೆ ಹಣ ಪಾವತಿಸಿ,ವಿದ್ಯುತ್ ಖಾಸಗೀಕರಣ ನಿಲ್ಲಿಸುವಂತೆ ಆಗ್ರಹಿಸಿ ಇಂದು ನವ ಕರ್ನಾಟಕ ರೈತ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ರಾಜ್ಯಾಧ್ಯಕ್ಷ ದಯಾನಂದ ಪಾಟೀಲ,ಆದಿನಾಥ ಹೀರಾ ,ಗುಂಡೇರಾಯ ಅವರು ಸೇರಿದಂತೆ ಹಲವರು ಪಾಲ್ಗೊಂಡರು.