ನಗರದ ಬೊಮ್ಮನಹಳ್ಳಿ ಕ್ಷೇತ್ರ ವ್ಯಾಪ್ತಿಯ ಅಕ್ಷಯ ನಗರದ ಗೋಕುಲ್ ಪ್ಲಾಜಾದಲ್ಲಿಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ನ್ಯಾನಪ್ಪನಹಳ್ಳಿ ಹಾಗೂ ಸುತ್ತಮುತ್ತಲಿನ ನಿವಾಸಿಗಳು, ಬಿಜೆಪಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ಎಂ. ಮಂಜುನಾಥ್ (ಮಂಜು) ಗೋಕುಲ್ ಗ್ರೂಪ್ಸ್‌ನ ಮಾಲೀಕರಾದ ಮಂಜುಳಾ ಮತ್ತಿತರರು ಭಾಗವಹಿಸಿದ್ದರು.