
ಕಲಬುರಗಿ: ಭಾರತ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿಗಳು ಕರ್ನಾಟಕ, ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಸಂಯುಕ್ತಾಶ್ರಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಕುರಿತು ಜಾಗೃತಿಗಾಗಿ ಇಂದು ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಯಿತು.


























