ಕಲಬುರಗಿ: ವಿಧಾನ ಪರಿಷತ್ ಸದಸ್ಯರಾಗಿ ಮೂರನೇ ಬಾರಿಗೆ ಆಯ್ಕೆಯಾದ ನಂತರ ನಗರಕ್ಕೆ ಆಗಮಿಸಿದ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಇಂದು ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು. ಪಕ್ಷದ ಜಿಲ್ಲಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಶಾಸಕ ಎಂ.ವೈ.ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ ಹರವಾಳ, ಮುಖಂಡರಾದ ಡಾ.ಕಿರಣ್ ದೇಶಮುಖ, ರಾಜಗೋಪಾಲ ರೆಡ್ಡಿ, ಮಹಾಂತಪ್ಪ ಸಂಗಾವಿ, ಈರಣ್ಣ ಝಳಕಿ, ಶಿವಾನಂದ ಹೊನಗುಂಟಿ, ರಾಜೇಶ ಗುತ್ತೇದಾರ, ಶಕೀಲ್ ಸರಡಗಿ, ಮಹಾಂತೇಶ ಕೌಲಗಿ ಸೇರಿದಂತೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.