ನಗರದ ಮಲ್ಲೇಶ್ವರಂನ ಮಂತ್ರಿಮಾಲ್ ಹಿಂಭಾಗದಲ್ಲಿ ನಿರ್ಮಾಣಗೊಳ್ಳಲಿರುವ ಪಾದಚಾರಿ ಸುರಂಗ ಮಾರ್ಗಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣನವರು ಚಾಲನೆ ನೀಡಿದರು. ಸಚಿವ ಕೃಷ್ಣಬೈರೇಗೌಡ, ಸಂಸದ ಪಿ.ಸಿ. ಮೋಹನ್, ಶಾಸಕ ದಿನೇಶ್ ಗುಂಡೂರಾವ್, ಬೆಂಗಳೂರು ಕೇಂದ್ರ ಬಿಜೆಪಿ ಅಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಹಾಗೂ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.