ರಾಜ್ಯ ರೆಡ್ಡಿ ಜನ ಸಂಘದ ನಿರ್ದೇಶಕ, ಕಾಂಗ್ರೆಸ್ ಮುಖಂಡ ಎಂ.ಎ. ಕೃಷ್ಣಾರೆಡ್ಡಿ (ಕಿಟ್ಟಿ) ಹಾಗೂ ಮಹದೇವಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎಂ.ಸಿ.ಸಿ. ರವಿ ಅವರು ಹುಟ್ಟುಹಬ್ಬ ಆಚರಿಸಿಕೊಂಡ ಸಂದರ್ಭದಲ್ಲಿ ಯುವ ಮುಖಂಡರಾದ ಧನುಷ್ ರೆಡ್ಡಿ ಮತ್ತಿತರರು ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ನೀಡಲಾಯಿತು.