ಕಲಬುರಗಿ: ನಗರದ ಸೇಡಂ ರಸ್ತೆಯ ಸರಕಾರಿ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ಇಂದು ಆಯೋಜಿಸಿದ್ದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಕುರಿತು ಅರಿವಿನ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಉದ್ಘಾಟಿಸಿದರು. ಡಾ.ಶರಣಬಸಪ್ಪ ಕ್ಯಾತನಾಳ, ಡಾ.ರವಿಕಾಂತಿ ಎಸ್.ಕ್ಯಾತನಾಳ್, ಡಾ.ಮಹಮ್ಮದ್ ಇರ್ಫಾನ್, ಡಾ.ಸವಿತಾ ತಿವಾರಿ ಸೇರಿದಂತೆ ಮತ್ತಿತರರು ಇದ್ದರು.