
ಕಲಬುರಗಿ: ನಾರಾಯಣಪುರ ರಾಜ್ಯ ಹೆದ್ದಾರಿ ( ಎಸ್‍ಎಚ್ 155)ಪಟ್ಟಣ ಕ್ರಾಸ್‍ದಿಂದ 5.50 ಕಿಮೀವರೆಗಿನ ರಸ್ತೆ ಕಾಮಗಾರಿಯ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಇಂದು ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಯಿಂದ ಲೋಕೋಪಯೋಗಿ ಇಲಾಖೆ ಅಧೀಕ್ಷಕ ಅಭಿಯಂತರರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ರಾಜ್ಯಾಧ್ಯಕ್ಷ ಶಿವಲಿಂಗ ಹಳಿಮನಿ,ಜಿಲ್ಲಾಧ್ಯಕ್ಷ ಸಂದೀಪ ಭರಣಿ ,ಅಂಬರೀಶ,ವಿಶ್ವನಾಥ ಅವರು ಸೇರಿದಂತೆ ಹಲವರು ಪಾಲ್ಗೊಂಡರು .






























