
ಕಲಬುರಗಿ: ಹಾಸ್ಟೆಲ್ ನೌಕರರ ಸೇವಾಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟ ಧರಣಿ ಆರಂಭಿಸಲಾಯಿತು. ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ,ಪರಶುರಾಮ ಹಡಲಗಿ,ಮೇಘರಾಜ ಕಠಾರೆ ಸೇರಿದಂತೆ ಹಲವರು ಪಾಲ್ಗೊಂಡರು.































