
ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರವರು ಪ್ರತಿಭಟನಾನಿರತ ರೈತರನ್ನು ಉದ್ದೇಶಿಸಿ ಮಾತನಾಡುವ ವೇಳೆ ನಾನು ಮುಖ್ಯಮಂತ್ರಿಯಾದರೆ ಎಕೆ-೪೭ ಕೊಡುತ್ತೇನೆ ಎಂದು ನೀಡಿರುವ ಹೇಳಿಕೆ ಕುರಿತು ಪ್ರಕರಣ ದಾಖಲಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್‌ರವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್‌ರವರಿಗೆ ದೂರು ನೀಡಿದರು. ಕಾಂಗ್ರೆಸ್ ಮುಖಂಡರಾದ ಕುಶಾಲ್ ಹರುವೇಗೌಡ, ಪುಟ್ಟರಾಜು, ಮಂಜುನಾಥ್.ಆರ್., ಪ್ರವೀಣ್ ಇದ್ದಾರೆ.





























