
ಕಲಬುರಗಿ: ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗಳನ್ನು ತರಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಸೊನಮ್ ವಾಂಗ್ಚೂಕ್ ಅವರು ದೆಹಲಿಯಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಸಂಯುಕ್ತ-ಹೋರಾಟ ಕರ್ನಾಟಕ (ಎಸ್‍ಕೆಎಂ) ನೇತೃತ್ವದಲ್ಲಿ ನಗರದ ಜಗತ್ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ಶರಣಬಸಪ್ಪ ಮಮಶೆಟ್ಟಿ, ಭೀಮಾಶಂಕರ ಮಾಡಿಯಾಳ್, ಎಂ.ಬಿ.ಸಜ್ಜನ್, ಅಲ್ತಾಫ್ ಇನಾಮದಾರ, ಚಂದು ಜಾಧವ್, ಮಲ್ಲಿಕಾರ್ಜುನ ಪಾಟೀಲ, ಕರೆಪ್ಪ ಕೆರಗೊಂಡ, ಸಾಜಿದ್ ಅಹ್ಮದ್, ದೇವಾನಂದ ಬಿರಾದಾರ, ನಾಗಯ್ಯ ಸ್ವಾಮಿ, ಗುರಣ್ಣಗೌಡ ಪಾಟೀಲ, ಶರಣಗೌಡ ಪಾಟೀಲ ಸೇರಿದಂತೆ ಮತ್ತಿತರರು ಇದ್ದರು.





























