ಕಲಬುರಗಿ: ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಿ ಬರ ಪರಿಹಾರ ನೀಡುವಂತೆ ಮತ್ತು ರೈತರ ಸಾಲಾ ಮನ್ನಾ ಮಾಡುವಂತೆ ಆಗ್ರಹಿಸಿ ನವ ಕರ್ನಾಟಕ ರೈತ ಸಂಘದ ಅಧ್ಯಕ್ಷ ದಯಾನಂದ ಪಾಟೀಲ ಅವರ ನೇತೃತ್ವದಲ್ಲಿ ನಗರದ ಗಂಜ್ ಪ್ರದೇಶದ ನಗರೇಶ್ವರ ಶಾಲೆಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಸಲಾಯಿತು. ಉಮಾಪತಿ ಪಾಟೀಲ, ಜಗದೇವಪ್ಪ ಪಾಟೀಲ, ಭಗವಂತರಾವ ಪಾಟೀಲ, ಮಹೇಶ ಕಡೆಚೂರ, ಡಾ.ಶಿವಲಿಂಗಪ್ಪ ಗೌಳಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.