ಕಲಬುರಗಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ತಡೆಯುವಲ್ಲಿ ವಿಫಲರಾದ ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೊನಮ್ ವಾಂಗ್ಚುಕ್ ಅವರನ್ನು ಬಲಪ್ರಯೋಗ ಮಾಡಿ ಹೊತ್ತೊಯ್ದಿರುವ ಕ್ರಮವನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ, ಎನ್‍ಟಿಎ ಮತ್ತು ಎನ್‍ಇಪಿ-2020 ಅನ್ನು ರದ್ದುಪಡಿಸಲು ಆಗ್ರಹಿಸಿ ಸಿಪಿಐಎಂ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ, ಸುಧಾಮ ಧನ್ನಿ, ಭೀಮಶೆಟ್ಟಿ ಯಂಪಳ್ಳಿ, ಪಾಂಡುರಂಗ ಮಾವಿನಕರ, ಎಂ.ಬಿ.ಸಜ್ಜನ್, ಶಾಂತಾ ಘಂಟೆ, ಚಂದಮ್ಮಾ ಗೋಳಾ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.