ಕಲಬುರಗಿ: ಆಮರಣಾಂತ ಉಪವಾಸ ಸತ್ಯಾಗ್ರಹಿ ಸೋನಮ್ ವಾಂಗಚುಕ್ ಅವರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡುವದು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ತನಿಖೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ದಲಿತ ಸೇನೆಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ,ಮಂಜುನಾಥ ಭಂಡಾರಿ,ಶಿವಲಿಂಗಪ್ಪ ದೊಡ್ಡಮನಿ,ಶಿವಲಿಂಗ ಮಾಡ್ಯಾಳಕರ್,ಕಪಿಲ ವಾಲಿ,ಸುನೀಲ ಸಿಂಧೆ ,ಪಂಚಶೀಲ ಚಾಂಬಾಳ ಸೇರಿದಂತೆ ಹಲವರು ಪಾಲ್ಗೊಂಡರು.