ಕಲಬುರಗಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಸಂಚಾಲಕ ಡಾ. ಡಿ.ಜಿ ಸಾಗರ,ರಾಜ್ಯ ಖಜಾಂಚಿ ಬಿ.ಸಿ ವಾಲಿ,ಜಿಲ್ಲಾ ಮುಖಂಡ ಸುರೇಶ ಹಾದಿಮನಿ ಅವರು ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡರು.