
ಕಲಬುರಗಿ: ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಇಂದು ಆಯೋಜಿಸಿದ್ದ “ಹಿಂದಿ ಶಿಕ್ಷಕರ ಜ್ವಲಂತ ಸಮಸ್ಯೆಗಳ ಚರ್ಚಾ” ಸಭೆಯನ್ನು ವಿಧಾನ ಪರಿಷತ್ ಸದಸ್ಯ ಶಶೀಲ ಜಿ.ನಮೋಶಿ ಉದ್ಘಾಟಿಸಿದರು. ಸಂಘದ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಬಿರಾದಾರ, ಭೀಮಸಿಂಗ್ ರಾಠೋಡ್, ಬಸವರಾಜ ಬಳೂಂಡಗಿ, ಚಂದ್ರಕಾಂತ ಏರಿ, ರಾಜೇಶ್ ನೀಲಹಳ್ಳಿ ಸೇರಿದಂತೆ ಮತ್ತಿತರರು ಇದ್ದರು.






























