ನಗರದ ಶೇಷಾದ್ರಿಪುರಂನ ಜೆಡಿಎಸ್ ಕಚೇರಿಯಲ್ಲಿಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ದೇವೇಗೌಡರವರಿಗೆ ಶ್ರದ್ಧಾಂಜಲಿ ಸಭೆ ನಡೆಯಿತು. ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್, ಮಾಜಿ ಶಾಸಕ ಕೃಷ್ಣಾರೆಡ್ಡಿ, ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಡಾ. ಟಿ.ಎ. ಶರವಣ, ಮುಖಂರಾದ ಆರ್. ಪ್ರಕಾಶ್ ಮತ್ತಿತರರು ಚನ್ನಮ್ಮನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.