
ಕಲಬುರಗಿ: ಕಲಬುರಗಿ ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿ, ಬರ ಕಾಮಗಾರಿ ಪ್ರಾರಂಭಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಜಿಲ್ಲಾ ಮಂಡಳಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಡಾ.ಮಹೇಶಕುಮಾರ ರಾಠೋಡ್, ಸಿದ್ದಪ್ಪ ಪಾಲ್ಕಿ, ಪ್ರಭುದೇವ ಯಳಸಂಗಿ, ಭೀಮಾಶಂಕರ ಮಾಡಿಯಾಳ್, ಹೆಚ್.ಎಸ್.ಪತಕಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.



























