ಕಲಬುರಗಿ: ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಆಗ್ರಹಿಸಿ ಆಲ್ ಇಂಡಿಯಾ ಮಜ್ಲೀಸ್-ಇ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಎಐಎಂಐಎಂ ಜಿಲ್ಲಾ ಅಧ್ಯಕ್ಷ ಸೈಯ್ಯದ್ ಮೊಹಮ್ಮದ್ ಸಿರಾಜುದ್ದೀನ್ ಸೋಹೆರ್‍ವಾದ್ರಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.