
ಕಲಬುರಗಿ: ಗ್ರಾಮ ಪಂಚಾಯತಿ ಕರವಸೂಲಿಗಾರ,ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರರ
ಪದೋನ್ನತಿಗಾಗಿ ಅಧಿಸೂಚನೆ ಹೊರಡಿಸದೇ ಹಿಂದೆ ತಯಾರಿಸಿದ ತಾತ್ಕಾಲಿಕ ಪಟ್ಟಿಯನ್ನು ರದ್ದುಪಡಿಸಿ, ಹೊಸ ಅಧಿಸೂಚನೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಆಗ್ರಹಿಸಿ ಇಂದು ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಜಿಪಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ರಾಜ್ಯಾಧ್ಯಕ್ಷ ಪ್ರಭಾಕರ ಹದನೂರ,ಜಿಲ್ಲಾಧ್ಯಕ್ಷ ಚಂದ್ರಕಾಂತ ಸಗರಕರ್,ಸಿದ್ರಾಮ ಹೊಸಮನಿ ಅವರು ಸೇರಿದಂತೆ ಹಲವರು ಭಾಗವಹಿಸಿದರು.





























