ಕಲಬುರಗಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಇಂದು ಸಂಘಟನಾ ಸೃಜನ್ ಅಭಿಯಾನದ ಕಲಬುರಗಿ ಜಿಲ್ಲೆಯ ಎಐಸಿಸಿ ಉಸ್ತುವಾರಿ, ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಶಾಸಕ ಡಾ. ವಿಶ್ವಜಿತ್ ಕದಮ್ ಅವರು ಅಭಿಯಾನದ ಕುರಿತು ಸಭೆ ನಡೆಸಿದರು.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರು ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು .