
ಕಲಬುರಗಿ: ಗೃಹ, ಐಟಿಬಿಟಿ,ಇ-ಆಡಳಿತ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ (ಪ್ರಕೃತಿ ವಿಕೋಪ) ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಬರ ಪರಿಸ್ಥಿತಿ ಪರಿಶೀಲನಾ ಸಭೆ ನಡೆಯಿತು. ಸಚಿವ ಡಾ.ಶರಣಪ್ರಕಾಶ್ ಪಾಟೀಲ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ತಿಪ್ಪಣ್ಣಪ್ಪ ಕಮಕನೂರ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ ಹರವಾಳ, ಜಿಲ್ಲಾಧಿಕಾರಿ ಇಕ್ರಂ ಶರೀಫ್, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ.ಸೇರಿದಂತೆ ಇತರ ಅಧಿಕಾರಿಗಳು ಇದ್ದರು.






























