
ಕಲಬುರಗಿ: ಭೀಮಾ ಏತನೀರಾವರಿ ಯೋಜನೆಯ ಹಿನ್ನೀರಿನಿಂದ ಮುಳುಗಡೆಯಾದ ಅಫಜಲಪುರ ತಾಲ್ಲೂಕಿನ ಭಂಕಲಗಾ ಗ್ರಾಮವನ್ನು ಸಂಪೂರ್ಣ ಮುಳುಗಡೆ ಗ್ರಾಮವೆಂದು ಘೋಷಿಸಿ ಪೂರ್ತಿ ಗ್ರಾಮವನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿದರು. ಗ್ರಾಮದ ಮೌಲಾಸಾಬ ಮಕಾನದಾರ, ಮಹಾದೇವ ಕಾಂಬಳೆ, ಏಗಣ್ಣ ಸುತಗುಡಿ, ಮಹಾಂತಗೌಡ ಕಡಕೋಳ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.






























