
ಕಲಬುರಗಿ: ನಗರದ ಶರಣಬಸವೇಶ್ವರ ಕೆರೆಯ ಸುತ್ತಲೂ ಕೈಗೊಂಡಿರುವ ಕಾಮಗಾರಿಯು ಕಳಪೆಗುಣಮಟ್ಟದ್ದಾಗಿದೆ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಂದು ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಎದುರು ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಎಇಇ ಮತ್ತು ಗುತ್ತಿಗೆದಾರರ ವಿರುದ್ಧ ಕಾನೂನುಕ್ರಮಕ್ಕೆ ಆಗ್ರಹಿಸಲಾಯಿತು.ಜಿಲ್ಲಾಧ್ಯಕ್ಷ ಸಂದೀಪ ಭರಣಿ ,ಪಪ್ಪು ಕಾಳೆ,ಸತೀಶ, ವಿಶ್ವನಾಥ, ಪ್ರಮೋದ ಮತ್ತು ವೇದಿಕೆ ಪದಾಧಿಕಾರಿಗಳು ಪಾಲ್ಗೊಂಡರು.




























