ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಚ್ಛತೆ, ದೇಶಪ್ರೇಮ ಮತ್ತು ಪರಿಸರ ಸಂರಕ್ಷಣೆ ಸಂದೇಶ ಸಾರುವ ಉದ್ದೇಶದಿಂದ ಮಹಾನಗರ ಪಾಲಿಕೆಯಿಂದ ಇಂದು ಬೆಳಿಗ್ಗೆ 7 ಗಂಟೆಗೆ ನಗರದ ಕಲಬುರಗಿ ಕೋಟೆಯಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದವರೆಗೆ ಆಯೋಜಿಸಿದ್ದ ರನ್ ಫಾರ್ ಶತಾಭಿಷೇಕಂ ಮ್ಯಾರಾಥಾನ್ ಮತ್ತು ಸೈಕ್ಲೋಥಾನ್ ಕಾರ್ಯಕ್ರಮಕ್ಕೆ ಮಹಾಪೌರರಾದ ವರ್ಷಾ ರಾಜೀವ್ ಜಾನೆ ಚಾಲನೆ ನೀಡಿದರು. ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ, ಎಸ್‍ಪಿ ಅಡ್ಡೂರು ಶ್ರೀನಿವಾಸಲು, ಡಿಸಿಪಿ ಶಾಲೂ ಸೇರಿದಂತೆ ಮತ್ತಿತರರು ಇದ್ದರು.