
ಕಲಬುರಗಿ: ನಗರದ ಜಿ.ಪಂ.ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೃಹ, ಐಟಿಬಿಟಿ,ಇ-ಆಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಸ್ಪೋಟ್ರ್ಸ್ ಹಬ್ಬದ ಲೋಗೋ ಮತ್ತು ವಿಡಿಯೋ ಅನಾವರಣಗೊಳಿಸಿ ಪೇಪರ್ ಟ್ರಾನ್ಸಿಕ್ಸ್ ಕಿಟ್ ವಿತರಣೆ ಮಾಡಿದರು. ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಕುಡಾ ಅಧ್ಯಕ್ಷ ಮಜರ್ ಆಲಂಖಾನ್, ಮೇಯರ್ ವರ್ಷಾ ರಾಜೀವ್ ಜಾನೆ, ಜಿಲ್ಲಾಧಿಕಾರಿ ಇಕ್ರಂ ಶರೀಫ್, ಜಿ.ಪಂ.ಸಿಇಒ ರಾಹುಲ್ ಸಂಕನೂರ, ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ, ಎಸ್‍ಪಿ ಅಡ್ಡೂರು ಶ್ರೀನಿವಾಸಲು ಇದ್ದರು.



























