
ಕಲಬುರಗಿ:ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ “ಧೀಮಂತ ಧುರೀಣ” ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಇಂದು ನಡೆಯಿತು. ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ನಟ ಪ್ರಕಾಶ್ ರಾಜ್, ವಕ್ಫ್ ಬೋರ್ಡ್ ಅಧ್ಯಕ್ಷ ಡಾ.ಸೈಯದ್ ಮಹ್ಮದ್ ಅಲಿ ಅಲ್ ಹುಸೇನಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಸಚಿವ ಡಾ.ಶರಣಪ್ರಕಾಶ್ ಪಾಟೀಲ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಮೇಯರ್ ವರ್ಷಾ ರಾಜೀವ್ ಜಾನೆ, ಮಾಜಿ ಸಚಿವ ರೇವು ನಾಯಕ್ ಬೆಳಮಗಿ, ಚಂದ್ರಿಕಾ ಪರಮೇಶ್ವರ, ಶರಣು ಮೋದಿ ಸೇರಿದಂತೆ ಮತ್ತಿತರ ಗಣ್ಯರು ಇದ್ದರು.































