
ಕಲಬುರಗಿ: ಸಚಿವರಾದ ಬಳಿಕ ಮೊದಲ ಬಾರಿಗೆ ಕಲಬುರಗಿ ನಗರಕ್ಕೆ ಆಗಮಿಸಿದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ ಧರ್ಮಸಿಂಗ್ ಅವರನ್ನು ಭವ್ಯ ಮೆರವಣಿಗೆಯ ಮೂಲಕ ಸ್ವಾಗತಿಸಲಾಯಿತು.ನಂತರ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ಸಚಿವ ಡಾ.ಶರಣ ಪ್ರಕಾಶ ಪಾಟೀಲ,ಶಾಸಕರಾದ ಎಂ.ವೈ ಪಾಟೀಲ, ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ,ಕೆಕೆಆರ್‍ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ,ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕುಡಾ ಅಧ್ಯಕ್ಷ ಮಜರ್ ಅಲಂ ಖಾನ್, ಚೇತನ ಗೋನಾಯಕ,ಬಾಬು ಹೊನ್ನಾನಾಯಕ, ಶರಣಕುಮಾರ ಮೋದಿ,ಸಂತೋಷ ಪಾಟೀಲ ದಣ್ಣೂರ,ಚಂದ್ರಿಕಾ ಪರಮೇಶ್ವರ, ಡಾ.ಕಿರಣ ದೇಶಮುಖ,ರಾಜಶೇಖರ ಸಿರಿ, ದಶರಥ ಬಾಬು ವಂಟಿ,ಅಶೋಕ ವೀರನಾಯಕ,ಲಾಲ್ ಅಹ್ಮದ್ ಸೇಠ್,ಮಹಾಂತಪ್ಪ ಸಂಗಾವಿ ಅವರು ಸೇರಿದಂತೆ ಹಲವಾರು ಅಭಿಮಾನಿಗಳು,ಕಾರ್ಯಕರ್ತರು ಉಪಸ್ಥಿತರಿದ್ದರು.






























