ಕಲಬುರಗಿ:ರಾಜ್ಯದ ಸರಕಾರಿ ಮತ್ತು ಅನುದಾನಿತ ಕಿರಿಯ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಯಲ್ಲಿ ಕಳೆದ 25 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರ ಎರಡು ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು ಮತ್ತು ವೇತನ ಹೆಚ್ಚಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಪ್ರಭುದೇವ ಯಳಸಂಗಿ, ಜಿಲ್ಲಾ ಅಧ್ಯಕ್ಷ ಹೆಚ್.ಎಸ್.ಪತಕಿ, ಸಿದ್ದಪ್ಪ ಪಾಲ್ಕಿ, ಯಶೋಧಾ ರಾಠೊಡ್, ಶೀಲಾ ಕಾಂಬಳೆ, ಶಿವಲಿಂಗಮ್ಮ ಲೆಂಗಟಿಕರ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.