
ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ ನಾಳೆ ಕೆ.ಆರ್.ಎಸ್. ಡ್ಯಾಂಗೆ ಮುತ್ತಿಗೆ ಹಾಕುವ ಹಿನ್ನೆಲೆ ಇಂದು ನಗರದ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಕನ್ನಡ ಚಳವಳ ನಾಯಕ ವಾಟಾಳ್ ನಾಗರಾಜ್‌ರವರ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಕನ್ನಡ ಹೋರಾಟಗಾರರಾದ ಕೆ.ಆರ್. ಕುಮಾರ್, ಜಗದೀಶ್ ಗೌಡ ಮತ್ತಿತರರ ಮುಖಂಡರು ಉಪಸ್ಥಿತರಿದ್ದರು.































