ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮುಂದುವರೆಯುತ್ತಿರುವ ಅವಾಂತರಗಳನ್ನು ಸರಿಪಡಿಸಲು ಪರಿಣಾಮಕಾರಿ ಕ್ರಮಗಳಿಗೆ ಮುಂದಾಗುವಂತೆ ಇಲ್ಲವೆ ಇಡೀ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು- ಜನಪರ ಸಂಘಟನೆಗಳ ಒಕ್ಕೂಟದ ಮುಖಂಡರು, ಸದಸ್ಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.