ನಗರದ ಯಲಹಂಕದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವಾರ್ಷಿಕ ಸಾಂಸ್ಕೃತಿಕ ಕಲೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಮಕ್ಕಳು, ಶಾಸ್ತ್ರೀಯ ನೃತ್ಯ, ಸಂಗೀತ ಮತ್ತು ವೈವಿಧ್ಯಮಯ ಕಲಾ ಪ್ರಕಾರಗಳನ್ನು ಪ್ರದರ್ಶಿಸಿದರು. ಮಕ್ಕಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅನುರಾ ಅಕಾಡೆಮಿ ಆಫ್ ಪರ್ಫಾರ್ಮಿಂಗ್ ಆರ್ಟ್ಸ್‌ನ ಕಲಾ ನಿದೇಶಕಿ ಸೌಮ್ಯ ವಿಶಾಲ್ ಮತ್ತಿತರರು ಇದ್ದಾರೆ.