
ಕಲಬುರಗಿ: ಕಲಬುರಗಿ ಜಿಲ್ಲೆಯನ್ನು ಬರ ಪೀಡಿತ ಪ್ರದೇಶ ಘೋಷಣೆ ಮಾಡದ ಮತ್ತು ರೈತರ ಬರ ಪರಿಹಾರ ಕೈಬಿಟ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಶಾಸಕ ಬಸವರಾಜ ಮತ್ತಿಮೂಡ, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೇಲ್ಕೂರ್, ಪಕ್ಷದ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅಶೋಕ ಬಗಲಿ, ನಗರ ಜಿಲ್ಲಾ ಅಧ್ಯಕ್ಷ ಚಂದು ಪಾಟೀಲ, ಮುಖಂಡರಾದ ನಿತೀನ್ ಗುತ್ತೇದಾರ, ಶರಣಪ್ಪ ತಳವಾರ, ವಿಶಾಲ ಧರ್ಗಿ, ಅರುಣಕುಮಾರ ಪಾಟೀಲ, ಸಂತೋಷ ಹಾದಿಮನಿ, ನಾಗರಾಜ ಮಹಾಗಾಂವಕರ್, ಶ್ರೀನಿವಾಸ ದೇಸಾಯಿ, ರವಿಚಂದ್ರ ಕಾಂತಿಕರ, ಡಾ.ಸುಧಾ ಹಾಲಕಾಯಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.





























